ಬೆಂಗಳೂರು: ‘ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಟೋಯಿಂಗ್ ಮಾಡುವ ಸಂಬಂಧ ನಿಯಮಾವಳಿ ರೂಪಿಸಲಾಗುತ್ತಿದೆ. ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಟೋಯಿಂಗ್ ಜಾರಿ ಆಗಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.
ನಗರದಲ್ಲಿ ಟೋಯಿಂಗ್ ಮರು ಜಾರಿ ಮಾಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದೆ. ಟೋಯಿಂಗ್‌ಗೆ ಇಲಾಖೆ ವಾಹನಗಳನ್ನೇ ಬಳಸಬೇಕಾ ಅಥವಾ ಹೊಸ ವಾಹನ ಖರೀದಿಸಿ ಟೋಯಿಂಗ್ ಮಾಡಬೇಕಾ ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಶೀಘ್ರದಲ್ಲೇ ಅದರ ರೂಪುರೇಷೆಗಳು ಸಿದ್ಧವಾಗಲಿದೆ. ಟೋಯಿಂಗ್ ಜಾರಿ ದಿನಾಂಕ ಇನ್ನೂ ನಿಗದಿ ಆಗಿಲ್ಲ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.