ವೈಟ್ ಟಾಪಿಂಗ್
ಬೆಂಗಳೂರು: ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಸ್ಕ್ ರಸ್ತೆಯಲ್ಲಿ ಬಿಬಿಎಂಪಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಭಾಗದ ರಸ್ತೆಯಲ್ಲಿ 30 ದಿನ ವಾಹನ ಸಂಚಾರ ಹಾಗೂ ನಿಲುಗಡೆ ನಿರ್ಬಂಧಿಸಲಾಗಿದೆ.
ಸಂಚಾರ ನಿರ್ಬಂಧಿಸಿರುವ ರಸ್ತೆ: ಮಾಸ್ಕ್ ರಸ್ತೆ–ಕೋಲ್ಸ್ ರಸ್ತೆ ಜಂಕ್ಷನ್ ಕಡೆಯಿಂದ ಮಾಸ್ಕ್ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ: ಕೋಲ್ಸ್ ರಸ್ತೆ ಕಡೆಯಿಂದ ಮಾಸ್ಕ್ ಜಂಕ್ಷನ್ ಕಡೆಗೆ ಹೋಗುವ ವಾಹನ ಚಾಲಕರು, ಸವಾರರು ಕೋಲ್ಸ್ ರಸ್ತೆಯಲ್ಲಿ ನೇರವಾಗಿ ಚಲಿಸಿ ಸ್ಟೀಫನ್ಸ್ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದುಕೊಳ್ಳಬೇಕು. ಸ್ಟೀಫನ್ಸ್ ರಸ್ತೆಯಲ್ಲಿ ನೇರವಾಗಿ ಸಾಗಿ ಎಂ.ಎಂ.ರಸ್ತೆ ತಲುಪಿ ಎಡಕ್ಕೆ ತಿರುವು ಪಡೆದು ಮಾಸ್ಕ್ ಜಂಕ್ಷನ್ ಕಡೆಗೆ ಸಂಚರಿಸಬಹುದು.
ವಾಹನ ನಿಲುಗಡೆ ನಿರ್ಬಂಧಿತ ಸ್ಥಳಗಳು: ಎಂ.ಎಂ. ರಸ್ತೆ, ಕೋಲ್ಸ್ ರಸ್ತೆ, ಮಾಸ್ಕ್ ರಸ್ತೆ, ಸ್ಟೀಫನ್ಸ್ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ನಿಲುಗಡೆಯನ್ನು ತಾತ್ಕಾಲಿಕವಾಗಿ ನಿರ್ಬಂಧ ಮಾಡಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.