ADVERTISEMENT

ಪುನೀತ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರದಾನ: ವಿಧಾನಸೌಧ ಬಳಿ ಮಾರ್ಗ ಬದಲಾವಣೆ

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 21:59 IST
Last Updated 31 ಅಕ್ಟೋಬರ್ 2022, 21:59 IST
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಗರದ ವಿಧಾನಸೌಧವು ಸೋಮವಾರ ರಾತ್ರಿ ವಿಶೇಷ ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸಿತು     – ಪ್ರಜಾವಾಣಿ ಚಿತ್ರ
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಗರದ ವಿಧಾನಸೌಧವು ಸೋಮವಾರ ರಾತ್ರಿ ವಿಶೇಷ ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸಿತು     – ಪ್ರಜಾವಾಣಿ ಚಿತ್ರ   

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಸಮಾರಂಭದಿಂದಾಗಿ ವಿಧಾನಸೌಧ ಸುತ್ತಮುತ್ತ
ವಾಹನಗಳ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

ಹೀಗಾಗಿ ಸಾರ್ವಜನಿಕರು ಬದಲಿ ಮಾರ್ಗಗಳ ಮೂಲಕ ಸಂಚರಿಸುವಂತೆ ಪೊಲೀಸರು ಕೋರಿದ್ದಾರೆ.

‘ವಿಧಾನಸೌಧ ಬಳಿಯ ಮೀಸೆ ತಿಮ್ಮಯ್ಯ ವೃತ್ತದಿಂದ ಕೆ.ಆರ್. ವೃತ್ತದವರೆಗೆ ಹೆಚ್ಚು ದಟ್ಟಣೆ ಉಂಟಾಗಬಹುದು. ಜನರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು. ಬಿಎಂಟಿಸಿ ಬಸ್ ಹಾಗೂ ಮೆಟ್ರೊ ಹೆಚ್ಚು ಬಳಸಬೇಕು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಇನ್‌ಫೆಂಟ್ರಿ ರಸ್ತೆ, ಅಲಿ ಅಸ್ಕರ್ ರಸ್ತೆ, ಅರಮನೆ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಕನ್ನಿಂಗ್‌ಹ್ಯಾಮ್ ರಸ್ತೆಗಳಲ್ಲಿ
ವಾಹನಗಳ ನಿಲುಗಡೆಯನ್ನೂ ನಿಷೇಧಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.