ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ನಗರದ ಮೇಖ್ರಿ ವೃತ್ತದಲ್ಲಿ ಬಿಜೆಪಿ ಬಾವುಟ ಹಾಗೂ ಕಟೌಟ್‌ಗಳನ್ನು ಹಾಕಲಾಗಿದೆ – ಪ್ರಜಾವಾಣಿ ಚಿತ್ರ
ಬೆಂಗಳೂರು: ‘ನಮ್ಮ ಮೆಟ್ರೊ’ದ ಹಳದಿ ಮಾರ್ಗದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಆಗಮಿಸುತ್ತಿದ್ದು, ಹಲವು ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಜಯನಗರದ ಮಾರೇನಹಳ್ಳಿ ಮುಖ್ಯ ರಸ್ತೆಯಲ್ಲಿರುವ ರಾಗಿಗುಡ್ಡ ಮೆಟ್ರೊ ನಿಲ್ದಾಣ ಬಳಿ ಹಳದಿ ಮೆಟ್ರೊ ಮಾರ್ಗದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಲಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಾಹನ ಸಂಚಾರ ನಿರ್ಬಂಧ?
ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30 ರವಗೆ ನಿರ್ಬಂಧಿಸಲಾಗಿದೆ.
* ಬನ್ನೇರುಘಟ್ಟ ರಸ್ತೆಯ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್‌ವರೆಗೆ
* ಕನಕಪುರ ರಸ್ತೆಯ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ
* ನಾಯಂಡಹಳ್ಳಿಯ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ
* ಸೋಂಪುರ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ
* ಪಿಇಎಸ್ ಕಾಲೇಜು ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್
* ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ
* ಮಾಗಡಿ ರಸ್ತೆಯ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ
* ಮಾದಾವರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ
ಸಂಚಾರ ನಿರ್ಬಂಧ (ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಸಂಚಾರ ನಿರ್ಬಂಧ)
* ಕೆಎಸ್‌ಆರ್ ರೈಲು ನಿಲ್ದಾಣದಿಂದ ಖೋಡೆ ಕೆಳಸೇತುವೆ, ಖೋಡೆ ವೃತ್ತದಿಂದ ಮಹಾರಾಣಿ ಸೇತುವೆ ವರೆಗೆ
* ಶಾಂತಲಾ ಜಂಕ್ಷನ್ ಕಡೆಯಿಂದ ಖೋಡೆ ಜಂಕ್ಷನ್‌ವರೆಗೆ
* ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್‌ವರೆಗೆ
* ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ
* ಮೌರ್ಯ/ಸುಬ್ಬಣ್ಣ ಜಂಕ್ಷನ್‌ನಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ
* ಲಾಲ್‌ಬಾಗ್ ಮುಖ್ಯದ್ವಾರದಿಂದ ಲಾಲ್‌ಬಾಗ್ ಪಶ್ಚಿಮದ್ವಾರದ ವರೆಗೆ
ಪರ್ಯಾಯ ಮಾರ್ಗ
* ಎಲ್‌ಟಿಪಿ ರಸ್ತೆ, ಕಾಟನ್‌ಪೇಟೆ ಮುಖ್ಯರಸ್ತೆ, ಮೈಸೂರು ರಸ್ತೆ, ಮಾಗಡಿ ಮುಖ್ಯರಸ್ತೆ ಮೂಲಕ ಸಂಚರಿಸಬಹುದು
* ಎಲ್‌ಟಿಪಿ ರಸ್ತೆ ಮತ್ತು ಕಾಟನ್‌ಪೇಟೆ ಮುಖ್ಯರಸ್ತೆ ಮೂಲಕ ಸಂಚರಿಸಬಹುದು
* ಎಲ್‌ಟಿಪಿ ರಸ್ತೆ ಮತ್ತು ಕಾಟನ್‌ಪೇಟೆ ಮುಖ್ಯರಸ್ತೆ ಮೂಲಕ ಸಂಚರಿಸಬಹುದು
* ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ರಾಜೀವ್ ಗಾಂಧಿ ಸರ್ಕಲ್ ಮೂಲಕ ಸಂಚರಿಸಬಹುದು
* ಕನಕದಾಸ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು ಸಾಗರ ಜಂಕ್ಷನ್ ಕಡೆ ಸಂಚರಿಸಬಹುದು
* ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಪಡೆದು ಆನಂದ್‌ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು
* ಲಾಲ್‌ಬಾಗ್ ಮುಖ್ಯದ್ವಾರದ ಮುಂದೆ ಎಡ ತಿರುವು ಅಥವಾ ಜೆ.ಸಿ ರಸ್ತೆಯಲ್ಲಿ ಬಲಕ್ಕೆ ತಿರುವು ಪಡೆದು ಸಂಚರಿಸಬಹುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.