ADVERTISEMENT

ಒಂದೇ ದಿನದಲ್ಲಿ ₹ 43.09 ಲಕ್ಷ ದಂಡ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 18:52 IST
Last Updated 10 ಫೆಬ್ರುವರಿ 2021, 18:52 IST

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ನಗರದಲ್ಲಿ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು, 8,362 ಪ್ರಕರಣಗಳನ್ನು ದಾಖಲಿಸಿಕೊಂಡು ₹43.09 ಲಕ್ಷ ದಂಡ ಸಂಗ್ರಹಿಸಿದ್ದಾರೆ.

‘ಕೆಲ ಸ್ಥಳಗಳಲ್ಲಿ ಪೊಲೀಸರು ಇರುವುದಿಲ್ಲವೆಂದು ತಿಳಿದು ಕೆಲ ಚಾಲಕರು, ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಹಲವು ರಸ್ತೆಗಳಲ್ಲಿ ಅನಿರೀಕ್ಷಿತ ರೀತಿಯಲ್ಲಿ ಕಾರ್ಯಾಚರಣೆ ಮಾಡಲಾಯಿತು’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಹೇಳಿದರು.

‘ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಕೆಲ ಚಾಲಕರು, ದಂಡ ಪಾವತಿ ಮಾಡಿರಲಿಲ್ಲ. ಅಂಥ 3,697 ಹಿಂದಿನ ಪ್ರಕರಣಗಳಲ್ಲಿ ₹ 12.36 ಲಕ್ಷ ದಂಡ ಹಾಗೂ 4,665 ಹೊಸ ಪ್ರಕರಣಗಳಲ್ಲಿ ₹ 30.65 ಲಕ್ಷ ದಂಡ ಸಂಗ್ರಹಿಸಲಾಗಿದೆ’ ಎಂದೂ ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.