ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಕಲ್ಪಿಸಿದ್ದ ಅವಕಾಶವನ್ನು ಬಳಸಿಕೊಂಡು 30 ಲಕ್ಷ ವಾಹನಗಳ ಮಾಲೀಕರು ದಂಡ ಪಾವತಿಸಿದ್ದಾರೆ. ₹90 ಕೋಟಿಗೂ ಹೆಚ್ಚು ದಂಡ ಸಂಗ್ರಹವಾಗಿದೆ ಎಂದು ಸಂಚಾರ ಪೊಲೀಸ್ ವಿಭಾಗದ ಮೂಲಗಳು ಹೇಳಿವೆ.
ಆಗಸ್ಟ್ 22ರಿಂದ ದಂಡ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಶುಕ್ರವಾರ (ಸೆ.12) ಕೊನೆಯ ದಿನವಾಗಿತ್ತು. ಕೊನೆಯ ದಿನ ಸರ್ವರ್ ಸಮಸ್ಯೆಯಿಂದಾಗಿ ಹಲವರು ದಂಡ ಪಾವತಿಸಲು ಪರದಾಡಿದರು.
ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್‌ಸೈಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಂಡು ವಾಹನ ಮಾಲೀಕರು ದಂಡ ಪಾವತಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.