ಸಾಂದರ್ಭಿಕ ಚಿತ್ರ
– ಎ.ಐ ಚಿತ್ರ
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಶೇಕಡ 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ವಾಹನ ಮಾಲೀಕರಿಗೆ ಅವಕಾಶ ಕಲ್ಪಿಸಿದ್ದು, ಈವರೆಗೆ ಎಲ್ಲ ವಿಧಾನಗಳ ಮೂಲಕ ಒಟ್ಟು 5,81,512 ಪ್ರಕರಣಗಳು ಇತ್ಯರ್ಥಗೊಂಡು, ₹16,38,18,150 ದಂಡ ಪಾವತಿಯಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ದ್ವಿಚಕ್ರ ವಾಹನದ ಮಾಲೀಕರೊಬ್ಬರು ₹46,500 ದಂಡ ಪಾವತಿಸಿದ್ದಾರೆ. ಹೆಲ್ಮೆಟ್ ರಹಿತ ಚಾಲನೆ, ಸಿಗ್ನಲ್ ಜಂಪ್ ಸೇರಿದಂತೆ ನೂರು ಪ್ರಕರಣಗಳು ಈ ವಾಹನದ ಮೇಲೆ ದಾಖಲಾಗಿತ್ತು. ತಮ್ಮ ದ್ವಿಚಕ್ರ ವಾಹನದ ಬೆಲೆಯಷ್ಟೇ ದಂಡ ಪಾವತಿಸಿರುವುದು ವಿಶೇಷ.
ಸೆಪ್ಟೆಂಬರ್ 12ರವರೆಗೆ ದಂಡ ಪಾವತಿಸಲು ಅವಕಾಶವಿದೆ. ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್ ಸೈಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಳ್ಳಬಹುದು.
ಬಳಿಕ ಪಾವತಿಸಲು ಇಚ್ಛಿಸುವ ದಂಡದ ಮೊತ್ತವನ್ನು ಆಯ್ಕೆ ಮಾಡಿದರೆ, ರಿಯಾಯಿತಿ ಮೊತ್ತದ ಪಾವತಿಯ ಆಯ್ಕೆ ಲಭ್ಯವಾಗುತ್ತದೆ. ನಂತರ ದಂಡದ ಮೊತ್ತ ಪಾವತಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.