ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಒಂದು ಬಾರಿಗೆ ಅನ್ವಯವಾಗುವಂತೆ ನೀಡಿರುವ ಈ ರಿಯಾಯಿತಿಯು ಫೆಬ್ರುವರಿ 11ರೊಳಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಸಾರಿಗೆ ಇಲಾಖೆ ಈ ಆದೇಶ ಹೊರಡಿಸಿದೆ.
‘ಪಾನಮತ್ತ ಚಾಲನೆ ಹೊರತುಪಡಿಸಿ ಉಳಿದೆಲ್ಲಾ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೂ ಈ ರಿಯಾಯಿತಿ ದೊರಕಲಿದೆ. ಸರ್ಕಾರದ ಆದೇಶ ನಮಗೆ ದೊರೆತಿದೆ. ದಂಡವನ್ನು ಯಾವ ರೀತಿ ಪಾವತಿಸಬೇಕು ಎಂಬುದನ್ನು ಸದ್ಯದಲ್ಲೇ ತಿಳಿಸಲಾಗುವುದು’ ಎಂದು ಬೆಂಗಳೂರು ಸಂಚಾರ ವಿಭಾಗದ ವಿಶೇಷ ಕಮಿಷನರ್ ಎಂ.ಎ.ಸಲೀಂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.