ADVERTISEMENT

ಹಬ್ಬಕ್ಕೆ ಹೊರಟ ಜನ; ವಿಪರೀತ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2019, 4:04 IST
Last Updated 26 ಅಕ್ಟೋಬರ್ 2019, 4:04 IST
ಬಸ್ಸಿಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಜನ
ಬಸ್ಸಿಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಜನ   

ಬೆಂಗಳೂರು: ನಗರದಲ್ಲಿ ನೆಲೆಸಿರುವ ಸಾರ್ವಜನಿಕರು ದೀಪಾವಳಿ ಹಬ್ಬ ಆಚರಿಸಲು ತಮ್ಮೂರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಮೆಜೆಸ್ಟಿಕ್‌ ಕಡೆ ಬಂದಿದ್ದರಿಂದಶುಕ್ರವಾರ ರಾತ್ರಿ ವಿಪರೀತ ದಟ್ಟಣೆ ಉಂಟಾಯಿತು.

ತಿಂಗಳ ನಾಲ್ಕನೇ ಶನಿವಾರದಿಂದಲೇ ಸರಣಿ ರಜೆ ಇರುವುದರಿಂದ ಹಬ್ಬಕ್ಕೂ ಮುನ್ನವೇ ಬಹುತೇಕ ಜನ ಊರಿಗೆ ಹೊರಟರು. ಶುಕ್ರವಾರ ಸಂಜೆಯಿಂದಲೇ ಪ್ರಯಾಣಿಕರು ಮೆಜೆಸ್ಟಿಕ್‌ನ ಬಸ್‌ ಹಾಗೂ ರೈಲು ನಿಲ್ದಾಣಗಳತ್ತ ಧಾವಿಸಿದರು.

ಮೆಜೆಸ್ಟಿಕ್‌ ಬಸ್‌ ನಿಲ್ದಾಣ, ಮೆಟ್ರೊ ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಹಾಗೂ ಸುತ್ತಮುತ್ತ ಸಾರ್ವಜನಿಕರು ಲಗೇಜು ಸಮೇತ ಗುಂಪು ಗುಂಪಾಗಿ ನಿಂತಿದ್ದು ಕಂಡುಬಂತು.

ADVERTISEMENT

ನಗರದ ಬೇರೆ ಬೇರೆ ಪ್ರದೇಶಗಳಿಂದ ಜನ ವಾಹನಗಳಲ್ಲಿ ಮೆಜೆಸ್ಟಿಕ್‌ಗೆ ಆಗಮಿಸಿದ್ದರು. ವಾಹನಗಳ ಸಂಖ್ಯೆ ಹೆಚ್ಚಾಗಿ ದಟ್ಟಣೆ ಉಂಟಾಯಿತು. ನಗರದಿಂದ ಬೇರೆ ಊರುಗಳಿಗೆ ಹೊರಟಿದ್ದ ಬಸ್‌ಗಳು ದಟ್ಟಣೆಯಲ್ಲಿ ಸಿಲುಕಿದ್ದವು.

ಆನಂದರಾವ್‌ ವೃತ್ತ, ಚಾಲುಕ್ಯ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್‌ಎಂಸಿ ಯಾರ್ಡ್‌, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಇತ್ತು.

ತಮ್ಮೂರಿಗೆ ಪ್ರಯಾಣಿಸಲು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ್ದ ಜನ, ನಿಲ್ದಾಣಕ್ಕೆ ಬಂದು ಬಸ್ಸಿಗಾಗಿ ಹುಡುಕಾಟ ನಡೆಸಿದರು. ದಟ್ಟಣೆಯಲ್ಲಿ ಸಿಲುಕಿದ್ದ ಬಸ್‌ ತಲುಪುವಷ್ಟರಲ್ಲಿ ಹೈರಾಣಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.