ADVERTISEMENT

ಸ್ವಾತಂತ್ರ್ಯ ಉದ್ಯಾನವನ ಸುತ್ತಮುತ್ತ ವಿಪರೀತ ಸಂಚಾರ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 7:45 IST
Last Updated 23 ಫೆಬ್ರುವರಿ 2021, 7:45 IST
ಪ್ರಜಾವಾಣಿ
ಪ್ರಜಾವಾಣಿ   

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿದ್ದು, ಸುತ್ತಮುತ್ತಲ ಸ್ಥಳಗಳಲ್ಲಿ ವಿಪರೀತ ಸಂಚಾರ ‌ದಟ್ಟಣೆ ಉಂಟಾಗಿದೆ.

ಮೆಜೆಸ್ಟಿಕ್, ಕೆ.ಆರ್. ವೃತ್ತ, ಆನಂದರಾವ್ ವೃತ್ತ, ಅರಮನೆ ರಸ್ತೆ, ರೇಸ್‌ಕೋರ್ಸ್ ರಸ್ತೆ, ಶಿವಾನಂದ ವೃತ್ತ, ಬಸವೇಶ್ವರ ವೃತ್ತ ಹಾಗೂ ಸುತ್ತಮುತ್ತ ವಾಹನಗಳು ನಿಧಾನವಾಗಿ ಚಲಿಸುತ್ತಿವೆ.

ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಅದರ ಜೊತೆಗೆಯೇ ಪಂಚಮಸಾಲಿ ಪ್ರತಿಭಟನೆಯೂ ಇದೆ. ಇದರ ಬಿಸಿ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರಿಗೆ ತಟ್ಟುತ್ತಿದೆ.

ADVERTISEMENT

ಖಾಸಗಿ ಶಾಲೆಗಳ ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ, ಶಾಲೆ ವಾಹನಗಳಲ್ಲೇ ಬಂದಿದ್ದಾರೆ. ಇದರಿಂದಾಗಿ ಶಾಲಾ ವಾಹನಗಳೇ ರಸ್ತೆಯಲ್ಲಿ ಎಲ್ಲೆಂದರಲ್ಲಿ ನಿಲುಗಡೆ ಮಾಡಲಾಗಿದ್ದು, ಇದು ದಟ್ಟಣೆಗೆ ಕಾರಣವಾಗುತ್ತಿದೆ. ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.