ADVERTISEMENT

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ಶೇ 50 ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 14:34 IST
Last Updated 21 ಆಗಸ್ಟ್ 2025, 14:34 IST
<div class="paragraphs"><p>ಸಂಚಾರ ನಿಯಮ ಉಲ್ಲಂಘನೆ</p></div>

ಸಂಚಾರ ನಿಯಮ ಉಲ್ಲಂಘನೆ

   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಶೇ 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರವು ಮತ್ತೊಮ್ಮೆ ಅವಕಾಶ ಕಲ್ಪಿಸಿದೆ.

ಪೊಲೀಸ್ ಇಲಾಖೆಯಲ್ಲಿ ಸಂಚಾರ ಇ–ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯ ಆಗುವಂತೆ ರಿಯಾಯಿತಿ ಘೋಷಿಸಲಾಗಿದೆ. ಈ ರಿಯಾಯಿತಿಯು ಆಗಸ್ಟ್‌ 23ರಿಂದ ಸೆಪ್ಟೆಂಬರ್ 12ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯ ಆಗಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ

ADVERTISEMENT

ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವ ಒಪ್ಪಿದ್ದ ಸರ್ಕಾರವು, ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಳೆದ ಜುಲೈ 5ರಿಂದ 11ರ ವರೆಗೆ ಈ ಹಿಂದೆ ಅವಕಾಶ ಕಲ್ಪಿಸಿತ್ತು. ಅವಧಿ ಮುಕ್ತಾಯ ಆಗಿದ್ದರಿಂದ ಮತ್ತೊಮ್ಮೆ ಕಾಲಾವಕಾಶ ನೀಡಲಾಗಿದೆ. ಪೊಲೀಸ್‌ ಇಲಾಖೆಯ ಸಂಚಾರ ಇ–ಚಲನ್‌ನಲ್ಲಿ 2023ರ ಫೆಬ್ರುವರಿ 11ರ ವರೆಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ದಂಡದ ಮೊತ್ತದಲ್ಲಿ ಶೇ 50 ರಿಯಾಯಿತಿ ಕಲ್ಪಿಸಲಾಗಿದೆ. ಸಾರಿಗೆ ಇಲಾಖೆಯಲ್ಲಿ 2018–19ಕ್ಕೂ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಿಗೂ ರಿಯಾಯಿತಿ ಕಲ್ಪಿಸುವಂತೆ ಕೋರಲಾಗಿತ್ತು. ಅದಕ್ಕೆ ಅನುಮತಿ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಅಸ್ತ್ರಂ ಆ್ಯಪ್‌, ಕೆಎಸ್‌ಪಿಎಸ್‌ ಆ್ಯಪ್‌, ಕರ್ನಾಟಕ ಒನ್‌ ಕೇಂದ್ರಗಳೂ ಸೇರಿದಂತೆ ಸಂಬಂಧಪಟ್ಟ ವೇದಿಕೆಗಳಲ್ಲಿ ದಂಡವನ್ನು ಮಾಲೀಕರು ಪಾವತಿ ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.