ADVERTISEMENT

ಸಂಚಾರ ನಿಯಮ ಉಲ್ಲಂಘನೆ: 711 ಡಿ.ಎಲ್‌ ಅಮಾನತು

​ಪ್ರಜಾವಾಣಿ ವಾರ್ತೆ
Published 9 ಜನವರಿ 2024, 15:24 IST
Last Updated 9 ಜನವರಿ 2024, 15:24 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ನಗರದಲ್ಲಿ ಕಳೆದ ವರ್ಷ ಅ‍ಪಘಾತ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಬೈಕ್‌ ಸವಾರರ 711 ಚಲನಾ ಪರವಾನಗಿ (ಡಿ.ಎಲ್‌)ಗಳನ್ನು ಅಮಾನತು ಮಾಡಲಾಗಿದೆ.

ನಗರ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ಕಳೆದ ವರ್ಷ 2,974 ಡಿ.ಎಲ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಬೆಂಗಳೂರು ನಗರ, ರಾಜ್ಯದ ಇತರೆ ಜಿಲ್ಲೆ ಹಾಗೂ ಹೊರ ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಡಿ.ಎಲ್‌ ಅಮಾನತು ಮಾಡುವಂತೆ ಕಳುಹಿಸಲಾಗಿತ್ತು. ಅದರಂತೆ ಸಾರಿಗೆ ಇಲಾಖೆ ಅಧಿಕಾರಿಗಳು, ಡಿ.ಎಲ್‌ ಅಮಾನತು ಮಾಡಿದ್ದಾರೆ. ಉಳಿದ, 2,263 ಡಿ.ಎಲ್‌ಗಳನ್ನು ಅಮಾನತು ಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.