ADVERTISEMENT

ಸಂಚಾರ ನಿಯಮ ಉಲ್ಲಂಘನೆ | ₹ 1.07 ಕೋಟಿ ದಂಡ ಬಾಕಿ: 85 ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 15:06 IST
Last Updated 17 ಫೆಬ್ರುವರಿ 2024, 15:06 IST
<div class="paragraphs"><p>&nbsp;ಸಾಂದರ್ಭಿಕ ಚಿತ್ರ</p></div>

 ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ₹ 1.07 ಕೋಟಿ ದಂಡ ಬಾಕಿ ಉಳಿಸಿಕೊಂಡಿದ್ದ 85 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ದಂಡ ಪಾವತಿ ಮಾಡುವಂತೆ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

₹ 50 ಸಾವಿರಕ್ಕಿಂತ ಹೆಚ್ಚು ದಂಡ ಬಾಕಿ ಉಳಿಸಿಕೊಂಡಿರುವ ಮಾಲೀಕರ ಮನೆಗಳಿಗೆ ಭೇಟಿ ನೀಡುತ್ತಿರುವ ಪೊಲೀಸರು, ದಂಡ ಪಾವತಿಸುವಂತೆ ಸೂಚಿಸುತ್ತಿದ್ದಾರೆ. ದಂಡ ಪಾವತಿಸಲು ಹಿಂದೇಟು ಹಾಕಿದವರ ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.

ADVERTISEMENT

‘ಹೆಲ್ಮೆಟ್ ರಹಿತ ಸವಾರಿ, ಸಿಗ್ನಲ್ ಜಂಪ್ ಸೇರಿದಂತೆ ವಿವಿಧ ಪ್ರಕಾರದ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಆಯಾ ಠಾಣೆ ಸಿಬ್ಬಂದಿ ದಂಡ ವಸೂಲಿ ಮಾಡುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಸದ್ಯಕ್ಕೆ 85 ವಾಹನಗಳನ್ನು (ಕಾರು ಹಾಗೂ 84 ದ್ವಿಚಕ್ರ ವಾಹನ) ಜಪ್ತಿ ಮಾಡಲಾಗಿದೆ. ಬಾಕಿ ದಂಡ ಪಾವತಿಸುವಂತೆ ಮಾಲೀಕರಿಗೆ ಹೇಳಲಾಗಿದೆ. ದಂಡ ಪಾವತಿ ಮಾಡದಿದ್ದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.