ADVERTISEMENT

ಸಂಚಾರ ನಿಯಮ ಉಲ್ಲಂಘನೆ ರಿಯಾಯಿತಿ ಅಂತ್ಯ: ₹ 12.31 ಕೋಟಿ ದಂಡ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 4:58 IST
Last Updated 19 ಮಾರ್ಚ್ 2023, 4:58 IST
   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ದಂಡ ಪಾವತಿಸಲು ಘೋಷಿಸಲಾಗಿದ್ದ ಶೇ 50ರಷ್ಟು ರಿಯಾಯಿತಿ ಅವಕಾಶ ಶನಿವಾರ ಮುಕ್ತಾಯಗೊಂಡಿದೆ.

ಮಾರ್ಚ್ 4ರಿಂದ 18ರವರೆಗಿನ ಅವಧಿಯಲ್ಲಿ ₹ 4.25 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹ 12.31 ಕೋಟಿ ದಂಡ ಸಂಗ್ರಹವಾಗಿದೆ.

ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆ ಒಪ್ಪಿದ್ದ ರಾಜ್ಯ ಸರ್ಕಾರ, ಮೊದಲ ಸುತ್ತಿನಲ್ಲಿ ಫೆ. 3ರಿಂದ 11ರವರೆಗೆ ದಂಡ ಪಾವತಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಿತ್ತು. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ, ಎರಡನೇ ಸುತ್ತಿನಲ್ಲಿ ರಿಯಾಯಿತಿ ವಿಸ್ತರಿಸಲಾಗಿತ್ತು.

ADVERTISEMENT

ನಗರದ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ), ಕರ್ನಾಟಕ ಒನ್‌- ಬೆಂಗಳೂರು ಒನ್ ಕೇಂದ್ರಗಳಲ್ಲಿ ಜನರು ದಂಡ ಪಾವತಿಸಿದ್ದಾರೆ. ಪೇಟಿಎಂ ಮೂಲಕವೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ದಂಡ ಕಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.