ADVERTISEMENT

ಸಂಚಾರ ನಿಯಮ ಉಲ್ಲಂಘನೆ: ವಾರದಲ್ಲಿ ₹ 4.44 ಕೋಟಿ ದಂಡ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 2:31 IST
Last Updated 21 ಅಕ್ಟೋಬರ್ 2020, 2:31 IST

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವರ ಪತ್ತೆಗೆ ನಗರದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಂದೇ ವಾರದಲ್ಲಿ ₹ 4.44 ಕೋಟಿ ದಂಡ ಸಂಗ್ರಹಿಸಿದ್ದಾರೆ.

‘ಅ.11ರಿಂದ ಅ.17ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದಕ್ಕಾಗಿ 1.06 ಲಕ್ಷ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಂಟಿ ಕಮಿಷನರ್ (ಸಂಚಾರ) ಬಿ.ಆರ್. ರವಿಕಾಂತೇಗೌಡ ತಿಳಿಸಿದರು.

‘ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲನೆ ಮಾಡಬೇಕು. ಇತ್ತೀಚೆಗೆ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿದ್ದು, ಅಂಥವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುತ್ತಿದೆ’ ಎಂದೂ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.