ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ದಕ್ಷಿಣ ವಿಭಾಗದ ಸಂಚಾರ ಪೊಲೀಸರು, ಬುಧವಾರ ಒಂದೇ ದಿನ 1,330 ಪ್ರಕರಣ ದಾಖಲು ಮಾಡಿಕೊಂಡು ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಳಿಗ್ಗೆ 11ರಿಂದ ಸಂಜೆ 4ರ ವರೆಗೆ ಕಾರ್ಯಾಚರಣೆ ನಡೆಸಲಾಯಿತು. ಸವಾರರು ಸಂಚಾರ ನಿಯಮ ಉಲ್ಲಂಘಿಸುತ್ತಿರುವುದನ್ನು ಪತ್ತೆಹಚ್ಚಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೇ ವೇಳೆ ವಿವಿಧ ಜಂಕ್ಷನ್‌ಗಳಲ್ಲಿ ಸವಾರರಿಗೆ ಸಂಚಾರ ನಿಮಯಗಳ ಬಗ್ಗೆಯೂ ಅರಿವು ಮೂಡಿಸಲಾಯಿತು ಎಂದು ಸಂಚಾರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.