ಬೆಂಗಳೂರು: ಪಶ್ಚಿಮ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು ಒಟ್ಟು 1,011 ಪ್ರಕರಣ ದಾಖಲಿಸಿದ್ದಾರೆ.
ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ 192 ಪ್ರಕರಣ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ 27, ನಿರ್ಬಂಧಿತ ಸ್ಥಳಗಳಲ್ಲಿ ವಾಹನ ನಿಲುಗಡೆ 103, ಏಕಮುಖ ಮಾರ್ಗದಲ್ಲಿ ವಾಹನ ಸಂಚಾರ 260, ಇತರೆ ಸಂಚಾರ ನಿಯಮ ಉಲ್ಲಂಘನೆ 429 ಪ್ರಕರಣಗಳು ಸೇರಿ 1,011 ಪ್ರಕರಣ ದಾಖಲು ಮಾಡಲಾಗಿದೆ. ₹5.26 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ನಗರ ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.