ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಶೇ 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಮೊದಲ ದಿನವಾದ ಶನಿವಾರ ₹4.18 ಕೋಟಿ ದಂಡ ಪಾವತಿಯಾಗಿದೆ. 1,48,747 ಪ್ರಕರಣಗಳು ನಗರದಲ್ಲಿ ಇತ್ಯರ್ಥವಾಗಿವೆ ಎಂದು ಸಂಚಾರ ಪೊಲೀಸರು ಹೇಳಿದರು.
ಸೆಪ್ಟೆಂಬರ್ 12ರ ವರೆಗೆ ದಂಡ ಪಾವತಿಸಲು ಅವಕಾಶವಿದೆ.
ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್‌ಸೈಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಳ್ಳಬಹುದು. ಬಳಿಕ, ಪಾವತಿಸಲು ಇಚ್ಛಿಸುವ ದಂಡದ ಮೊತ್ತವನ್ನು ಆಯ್ಕೆ ಮಾಡಿದರೆ, ರಿಯಾಯಿತಿ ಮೊತ್ತದ ಪಾವತಿಯ ಆಯ್ಕೆ ಲಭ್ಯವಾಗುತ್ತದೆ. ನಂತರ, ದಂಡದ ಮೊತ್ತ ಪಾವತಿಸಬಹುದು ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.