ADVERTISEMENT

ಸಂಚಾರ ನಿಯಮ ಉಲ್ಲಂಘನೆ: ₹ 21.52 ಲಕ್ಷ ದಂಡ ವಸೂಲಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 19:31 IST
Last Updated 25 ಸೆಪ್ಟೆಂಬರ್ 2019, 19:31 IST
   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಹೊಸ ದಂಡ ಮೊತ್ತವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿ, ಅಧಿಸೂಚನೆ ಹೊರಡಿಸಿದ ಬಳಿಕವೂ ದಾಖಲಾಗುವ ಪ್ರಕರಣಗಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ.

24 ಗಂಟೆಗಳ ಅವಧಿಯಲ್ಲಿ (ಮಂಗಳವಾರ) ಸಂಚಾರ ನಿಯಮ ಉಲ್ಲಂಘಿಸಿದ 6,782 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ನಗರ ಸಂಚಾರ ಪೊಲೀಸರು ₹ 21,52,100 ದಂಡ ವಸೂಲಿ ಮಾಡಿದ್ದಾರೆ.

ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಿ, ಕೇಂದ್ರ ಸರ್ಕಾರ ದಂಡದ ಮೊತ್ತವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿತ್ತು. ಆದರೆ, ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಕಾರಣ, ರಾಜ್ಯ ಸರ್ಕಾರ ದಂಡದ ಮೊತ್ತವನ್ನು ಪರಿಷ್ಕರಿಸಿತ್ತು. ಆದರೆ, ವಾಹನ ಸವಾರರು ಮಾತ್ರ ನಿಯಮ ಉಲ್ಲಂಘಿಸುವ ಚಾಳಿ ಮುಂದುವರಿಸಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.