
ಸಾಂದರ್ಭಿಕಚಿತ್ರ
ಬೆಂಗಳೂರು: ಎಚ್‌ಎಎಲ್ ವಿಮಾನ ನಿಲ್ದಾಣದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ಗ್ರಾಮದಲ್ಲಿ ಊರಹಬ್ಬದ ಅಂಗವಾಗಿ ಪಲ್ಲಕ್ಕಿ ಉತ್ಸವ ಹಾಗೂ ಮೆರವಣಿಗೆ ನಡೆಯಲಿದ್ದು ಪಣತ್ತೂರು ರೈಲ್ವೆ ಕೆಳಸೇತುವೆ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮೇ 29ರ ಬೆಳಿಗ್ಗೆ 7ರಿಂದ ಮೇ 30ರ ಸಂಜೆ 7ರ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು:
ವರ್ತೂರು ಕಡೆಯಿಂದ ಕಾಡುಬಿಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು, ವಿಬ್ಗಯಾರ್ ಶಾಲೆ ರಸ್ತೆ ಕಡೆಯಿಂದ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸಿ ಹೊರವರ್ತುಲ ರಸ್ತೆಯ ಮೂಲಕ ಕಾಡುಬಿಸನಹಳ್ಳಿಗೆ ಸಂಚರಿಸಬಹುದು.
ಕಾಡುಬಿಸನಹಳ್ಳಿ ಜಂಕ್ಷನ್ ಕಡೆಯಿಂದ ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಹೊರವರ್ತುಲ ರಸ್ತೆಯ ಮೂಲಕ ಕುಂದಲಹಳ್ಳಿ ಕಡೆಗೆ ಸಂಚರಿಸಿ ವಿಬ್ಗಯಾರ್ ಶಾಲೆ ರಸ್ತೆಯ ಮೂಲಕ ವರ್ತೂರು ಕಡೆಗೆ ಸಂಚರಿಸಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.