ಅಪಘಾತ
ಬೆಂಗಳೂರು: ನೆಲಮಂಗಲ ತಾಲ್ಲೂಕಿನ ದಾಬಸ್‌ಪೇಟೆ ಬಳಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಗೋಪಾಲ್ (60), ಶಶಿಕಲಾ (55), ದೀಪಿಕಾ (35) ಹಾಗೂ ಕಾರು ಚಾಲಕ ಗೋಪಾಲ್ (45) ಮೃತಪಟ್ಟಿದ್ಧಾರೆ. ಎಲ್ಲರೂ ಮಲ್ಲೇಶ್ವರದ ನಿವಾಸಿಗಳು. ಅಪಘಾತದಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.
ಬೆಂಗಳೂರಿನಿಂದ ತುಮಕೂರು ಕಡೆಗೆ ಕಾರು ಚಲಿಸುತ್ತಿತ್ತು. ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು.
ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.