ADVERTISEMENT

ಬೆಂಗಳೂರು | ಸುಗಂಧ ದ್ರವ್ಯ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ; ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 13:34 IST
Last Updated 18 ಫೆಬ್ರುವರಿ 2024, 13:34 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕೆಂಗೇರಿ ಬಳಿಯ ರಾಮಸಂದ್ರದಲ್ಲಿರುವ ಸುಗಂಧ ದ್ರವ್ಯ ತಯಾರಿಕೆ ಕಾರ್ಖಾನೆಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಸುಗಂಧ ದ್ರವ್ಯ ತಯಾರಿಸಲು ರಾಸಾಯನಿಕ ಬಳಸಲಾಗುತ್ತಿತ್ತು. ಇದೇ ರಾಸಾಯನಿಕವನ್ನು ಡಬ್ಬಿಗಳಲ್ಲಿ ತುಂಬಿಡಲಾಗಿತ್ತು. ಭಾನುವಾರ ರಾಸಾಯನಿಕ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ.

ADVERTISEMENT

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.