ADVERTISEMENT

‘ನಮ್ಮ ಮೆಟ್ರೊ’ ಕಾಮಗಾರಿ ವೇಳೆ ವಯಾಡಕ್ಟ್ ಉರುಳಿ ಆಟೊ ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 6:41 IST
Last Updated 16 ಏಪ್ರಿಲ್ 2025, 6:41 IST
<div class="paragraphs"><p>ಮೆಟ್ರೊ ಕಾಮಗಾರಿಗೆ ಬಳಸಲು ವಯಾಡಕ್ಟ್ ಉರುಳಿ ಬಿದ್ದಿರುವುದು</p></div>

ಮೆಟ್ರೊ ಕಾಮಗಾರಿಗೆ ಬಳಸಲು ವಯಾಡಕ್ಟ್ ಉರುಳಿ ಬಿದ್ದಿರುವುದು

   

ಚಿತ್ರ: ಎಕ್ಸ್‌

ಬೆಂಗಳೂರು: ಮೆಟ್ರೊ ಕಾಮಗಾರಿ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಗರದ ಕೋಗಿಲು ಕ್ರಾಸ್ ಬಳಿ ಸಂಭವಿಸಿದೆ.

ADVERTISEMENT

ಲಾರಿಯಲ್ಲಿ ಸಾಗಿಸುತ್ತಿದ್ದ ವಯಾಡಕ್ಟ್ (ಬೃಹತ್ ತಡೆಗೋಡೆ) ಉರುಳಿ ಬಿದ್ದ ಪರಿಣಾಮ ಆಟೊ ಚಾಲಕ ಖಾಸಿಂ ಸಾಬ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ತಡರಾತ್ರಿ ಏರ್‌ಪೋರ್ಟ್‌ ಮಾರ್ಗದ ಮೆಟ್ರೊ ಕಾಮಗಾರಿಗೆ ಬಳಸಲು ವಯಾಡಕ್ಟ್ ಕೊಂಡೊಯ್ಯುತ್ತಿದ್ದ ಲಾರಿ ತಿರುವು ಪಡೆಯುವಾಗ ಅವಘಡ ಸಂಭವಿಸಿದೆ. ಅವಘಡದ ಮುನ್ಸೂಚನೆ ಅರಿತ ಪ್ರಯಾಣಿಕ ತಕ್ಷಣ ಆಟೊದಿಂದ ಇಳಿದಿದ್ದಾರೆ. ಆದರೆ, ಖಾಸೀಂ ಸಾಬ್ ಇಳಿಯುವಷ್ಟರಲ್ಲಿ ವಯಾಡೆಕ್ಟ್ ಉರುಳಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಿಡ್ಲಘಟ್ಟ ಮೂಲದ ಖಾಸೀಂ ಸಾಬ್ ಕುಟುಂಬ ಬೆಂಗಳೂರಿನಲ್ಲಿ ವಾಸವಿತ್ತು ಎಂದು ಸಹ ಚಾಲಕರು ಮಾಹಿತಿ ನೀಡಿದ್ದಾರೆ.

ಅವಘಡವನ್ನು ಕಂಡ ಜನ ಕೂಡಲೇ ರಕ್ಷಣೆಗೆ ಧಾವಿಸಿದ್ದರು. ಆದರೆ ಬೃಹದಾಕಾರದ ವಯಾಡಕ್ಟ್ ತೆರವುಗೊಳಿಸಲು ಕ್ರೇನ್ ಇರದ ಕಾರಣ ಪ್ರಯತ್ನ ವಿಫಲವಾಗಿದೆ. ಘಟನೆ ನಡೆದ ಎರಡು ಗಂಟೆಗಳ ಬಳಿ ಕ್ರೇನ್ ತರಿಸಿ ವಯಾಡಕ್ಟ್ ತೆರವುಗೊಳಿಸಿ ಮೃತದೇಹವನ್ನು ಹೊರ ತೆಗೆಯಲಾಗಿದೆ.

ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.