ADVERTISEMENT

ಖಾಸಗಿ ಕಾಲೇಜುಗಳ ಉಪನ್ಯಾಸಕರಿಗೂ ತರಬೇತಿ: ಚಿಂತನೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2019, 22:42 IST
Last Updated 30 ಡಿಸೆಂಬರ್ 2019, 22:42 IST

ಬೆಂಗಳೂರು: ಪಿಯು ಫಲಿತಾಂಶ ಸುಧಾರಣೆಗಾಗಿ ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ನೀಡುವ ವಿಷಯಾಧಾರಿತ ತರಬೇತಿ ಕಾರ್ಯಾಗಾರವನ್ನು ಖಾಸಗಿ ಕಾಲೇಜುಗಳ ಉಪನ್ಯಾಸಕರಿಗೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ.

ಇದೇ 29ರಂದು ಈ ಸಂಬಂಧ ‘ಪ್ರಜಾವಾಣಿ’ಯಲ್ಲಿಪ್ರಕಟವಾದ ವರದಿಗೆ ಸ್ಪಂದಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌, ಖಾಸಗಿ ಕಾಲೇಜುಗಳ ಉಪನ್ಯಾಸಕರು ಇಂತಹ ತರಬೇತಿ ಪಡೆಯುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆಗಳ ವಿವರವನ್ನು ಕೂಡಲೇ ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಪಿಯು ಇಲಾಖೆಯ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.‌

ಇಂತಹ ತರಬೇತಿಯಿಂದ ‌ವಿದ್ಯಾರ್ಥಿಗಳ ಕಲಿಕಾ ಮಟ್ಟ ಸುಧಾರಿಸುವುದು ನಿಶ್ಚಿತ ಎಂದುಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘಗಳೂ ಹೇಳಿವೆ ಎಂದು ಸಚಿವರು ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.