ADVERTISEMENT

ಠಾಣೆಯಲ್ಲಿ ಬೇರೂರಿದ್ದ 999 ಹೆಡ್‌ ಕಾನ್‌ಸ್ಟೆಬಲ್‌ಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 20:15 IST
Last Updated 25 ಜುಲೈ 2021, 20:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಸುಮಾರು 10 ವರ್ಷಗಳಿಂದ ಒಂದೇ ಠಾಣೆಯಲ್ಲಿ ಬೇರೂರಿದ್ದ 999 ಹೆಡ್‌ಕಾನ್‌ ಸ್ಟೆಬಲ್‌ಗಳನ್ನು ಶನಿವಾರ ವರ್ಗಾ ವಣೆ ಮಾಡಲಾಗಿದ್ದು, ಈ ಮೂಲಕ ನಗರದ ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಕ್ರಮ ಕೈಗೊಂಡಿದ್ದಾರೆ.

ನಗರದ ಠಾಣೆಗಳಲ್ಲಿನ 999 ಸಿಬ್ಬಂದಿಯನ್ನು ಏಕಕಾಲದಲ್ಲಿ ವರ್ಗಾವಣೆ ಮಾಡಿರುವುದು ಇತಿಹಾಸದಲ್ಲಿ ಇದೇ ಮೊದಲು
ಎನ್ನಲಾಗಿದೆ. ನಗರದ ಒಂದೇ ಠಾಣೆಯಲ್ಲಿ ಸುಮಾರು ವರ್ಷಗ ಳಿಂದ ಕೆಲಸ ಮಾಡುತ್ತಿರುವ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ಗಳನ್ನೂ ಸದ್ಯದಲ್ಲೇ ವರ್ಗಾವಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

‘ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಹೆಡ್‌ ಕಾನ್‌ಸ್ಟೆಬಲ್‌ಗಳು, ಸ್ಥಳೀಯ ಅಪರಾಧಿಗಳ ಜೊತೆ ಒಡನಾಟ ಇಟ್ಟುಕೊಂಡಿದ್ದರು. ಅವರ ಆಮಿಷಗಳಿಗೆ ಒಳಗಾಗುತ್ತಿದ್ದರು. ಅಪರಾಧ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿರಲಿಲ್ಲ. ಕೆಲವರು, ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದರು. ಇವೆಲ್ಲ ಅಂಶಗಳನ್ನು ಗಮನಿಸಿ ವರ್ಗಾವಣೆ ಮಾಡಲಾಗಿದೆ’ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.