2025-26ನೇ ಸಾಲಿನ ಬಜೆಟ್ ಪ್ರತಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಬಜೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಖಂಡನೀಯ ಎಂದು 'ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ' ಹೇಳಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಳವಳಿ ಸಹ ಅಧ್ಯಕ್ಷೆ ವೈಶಾಲಿ, ‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಬಜೆಟ್‌ನಲ್ಲಿ ಪ್ರತ್ಯೇಕ ವಸತಿ ಯೋಜನೆ ರೂಪಿಸಬೇಕು. ಪ್ರತಿಯೊಬ್ಬರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರು ಉದ್ಯಮಶೀಲತೆಯಲ್ಲಿ ತೊಡಗಿಸಿಕೊಳ್ಳಲು ಯೋಜನೆಯೊಂದನ್ನು ರೂಪಿಸಬೇಕು ಎಂಬ ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಗಣಿಸಿಲ್ಲ’ ಎಂದು ಆರೋಪಿಸಿದರು.
ಚಳವಳಿಯ ಮನೋಹರ್ ಎಲವರ್ತಿ ಮಾತನಾಡಿ, ‘ಬಜೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಪುನರ್ವಸತಿಗೆ ಕೇವಲ ₹3 ಕೋಟಿ ಮತ್ತು ಮೈತ್ರಿ ಯೋಜನೆಯ ಮಾಸಾಶನಕ್ಕೆ ₹2.45 ಕೋಟಿ ಅನುದಾನ ಒದಗಿಸಿರುವುದು ದುರಂತವೇ ಸರಿ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ನಿಗಮವೊಂದನ್ನು ಸ್ಥಾಪಿಸಿ, ವಾರ್ಷಿಕ ₹200 ಕೋಟಿ ಅನುದಾನ ಮೀಸಲಿಡುವ ಭರವಸೆ ಈಡೇರಿಸಿಲ್ಲ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.