ADVERTISEMENT

ಬೆಂಗಳೂರು: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳ ವಶ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2025, 16:06 IST
Last Updated 3 ಫೆಬ್ರುವರಿ 2025, 16:06 IST
ತೆರಿಗೆ ಪಾವತಿಸದೇ ಸಂಚರಿಸುತ್ತಿದ್ದ ಐಷಾರಾಮಿ ಕಾರುಗಳನ್ನು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ನೇತೃತ್ವದ ತಂಡ ವಶಕ್ಕೆ ಪಡೆಯಿತು
ತೆರಿಗೆ ಪಾವತಿಸದೇ ಸಂಚರಿಸುತ್ತಿದ್ದ ಐಷಾರಾಮಿ ಕಾರುಗಳನ್ನು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ನೇತೃತ್ವದ ತಂಡ ವಶಕ್ಕೆ ಪಡೆಯಿತು   

ಬೆಂಗಳೂರು: ಬೇರೆ ರಾಜ್ಯಗಳಲ್ಲಿ ನೋಂದಣಿ ಮಾಡಿಕೊಂಡು ರಾಜ್ಯದಲ್ಲಿ ಮೋಟಾರು ವಾಹನ ತೆರಿಗೆ ಪಾವತಿಸದೇ ಸಂಚರಿಸುತ್ತಿದ್ದ ಪೋರ್ಷೆ, ಬಿಎಂಡಬ್ಲೂ, ಬೆಂಜ್‌, ಔಡಿ, ಔಸ್ಟಿನ್‌, ರೇಂಜ್‌ ರೋವರ್‌ ಸೇರಿದಂತೆ 30 ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಸಾರಿಗೆ ಇಲಾಖೆ (ಪ್ರವರ್ತನ) ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಬಿ. ಶ್ರೀನಿವಾಸ್‌ ಪ್ರಸಾದ್, ದೀಪಕ್‌, ಶ್ರೀನಿವಾಸಪ್ಪ ಮತ್ತು ರಂಜಿತ್‌ ಅವರನ್ನು ಒಳಗೊಂಡ 41 ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತ್ತು.

ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು ₹ 3 ಕೋಟಿ ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಸಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.