ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ.15ರಿಂದ 19ರವರೆಗೆ ನಡೆಸಲು ಉದ್ದೇಶಿಸಿದ್ದ ಉಪವಾಸ ಸತ್ಯಾಗ್ರಹವನ್ನು ಮುಂದೂಡಿದೆ.
ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿತ್ತು. ಸತ್ಯಾಗ್ರಹದ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದಾಗ 15 ದಿನಗಳ ಒಳಗೆ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಹಾಗಾಗಿ ಸತ್ಯಾಗ್ರಹ ಕೈಬಿಡಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಜಂಟಿ ಕ್ರಿಯಾ ಸಮಿತಿಗೆ ಪತ್ರ ಬರೆದಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.