
ಬೆಂಗಳೂರು: ‘ಬಸ್ ಪ್ರಯಾಣ ದರ ಹೆಚ್ಚಳ ವಿಷಯದಲ್ಲಿ ಇನ್ನು ಮುಂದೆ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಸದ್ಯ ದರ ಹೆಚ್ಚಳದ ಪ್ರಸ್ತಾವ ಕೂಡ ಇಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
‘ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ನಿಗದಿಗಾಗಿ ಸಮಿತಿ ರಚನೆ ಮಾಡಲಾಗುವುದು. ಸಮಿತಿಯು ಕಾಲಕಾಲಕ್ಕೆ ಸಂಸ್ಥೆಗಳ ಖರ್ಚುವೆಚ್ಚಗಳನ್ನು ಆಧರಿಸಿ ಟಿಕೆಟ್ ದರ ಪರಿಷ್ಕರಣೆ ಮಾಡಲಿದೆ. ಅದಕ್ಕೆ ಅಗತ್ಯ ಮಾನದಂಡಗಳನ್ನು ಅನುಸರಿಸಲಿದೆ’ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.
‘ಬಸ್ ಟಿಕೆಟ್ ದರ ಹೆಚ್ಚಳವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ಸುದ್ದಿ ನಿಜವಲ್ಲ. ಟಿಕೆಟ್ ದರವನ್ನು ಇತ್ತೀಚೆಗಷ್ಟೇ ಹೆಚ್ಚಳ ಮಾಡಲಾಗಿತ್ತು. ಮತ್ತೆ ದರ ಹೆಚ್ಚಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಊಹಾಪೋಹಗಳಿಗೆ ಜನ ಕಿವಿಗೊಡುವ ಅಗತ್ಯವಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.