ADVERTISEMENT

ಬಿಎಂಟಿಸಿ ನೌಕರರ ಮೇಲೆ ಹಲ್ಲೆ; 9 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 5:04 IST
Last Updated 13 ಡಿಸೆಂಬರ್ 2020, 5:04 IST
ಬೆಂಗಳೂರು ಮೆಜೆಸ್ಟಿಕ್ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ
ಬೆಂಗಳೂರು ಮೆಜೆಸ್ಟಿಕ್ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ   

ಬೆಂಗಳೂರು: ಕರ್ತವ್ಯಕ್ಕೆ ಹಾಜರಾಗಿದ್ದ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ 9 ಮಂದಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

'ಹಲ್ಲೆ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 9 ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.

'ಬಿಎಂಟಿಸಿ ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸುತ್ತಿದ್ದಾರೆ. ಅದರ ನಡುವೆಯೂ ಕೆಲ ನೌಕರರು, ಕರ್ತವ್ಯಕ್ಕೆ ಹಾಜರಾಗಲು ಶನಿವಾರ ಮೆಜೆಸ್ಟಿಕ್ ನಿಲ್ದಾಣಕ್ಕೆ ಬಂದಿದ್ದರು. ಅದೇ ವೇಳೆಯೇ ಗುಂಪೊಂದು, ನೌಕರರ ಮೇಲೆ ಹಲ್ಲೆ ನಡೆಸಿತ್ತು' ಎಂದೂ ಹೇಳಿದರು.

'ನಿಲ್ದಾಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕರ್ತವ್ಯಕ್ಕೆ ಹಾಜರಾಗುವ ನೌಕರರಿಗೆ ಭದ್ರತೆ ನೀಡಲಾಗುವುದು' ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.