
ಎಐ ಚಿತ್ರ
ಬೆಂಗಳೂರು: ಕೃಷ್ಣದೇವರಾಯ ರೈಲು ನಿಲ್ದಾಣದ ಬಳಿ ಟ್ರಾವೆಲ್ಸ್ ಏಜೆನ್ಸಿ ಮಾಲೀಕರೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿದ್ದಾರೆ.
ಉಡುಪಿ ಜಿಲ್ಲೆ ಬ್ರಹ್ಮಾವರದ ಕಿಶೋರ್ ಕುಮಾರ್ ಶೆಟ್ಟಿ(40) ಆತ್ಮಹತ್ಯೆ ಮಾಡಿಕೊಂಡವರು.
ಕಿಶೋರ್ ಕುಮಾರ್ ಶೆಟ್ಟಿ ಅವರು ಉಡುಪಿಯಿಂದ ಹಲವು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದು ಗೋವಿಂದರಾಜನಗರದಲ್ಲಿ ಕುಟುಂಬದವರ ಜತೆಗೆ ವಾಸವಾಗಿದ್ದರು.
ಟ್ರಾವೆಲ್ಸ್ ಏಜೆನ್ಸಿಯಲ್ಲಿ ಉಂಟಾದ ನಷ್ಟದಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು. ಮತ್ತೊಂದೆಡೆ ಈ ಹಿಂದೆ ಪಾಲುದಾರಿಕೆಯಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಆಗಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆಯೂ ಟ್ರಾವೆಲ್ಸ್‌ನ ಸಿಬ್ಬಂದಿಗೆ ವೇತನ ನೀಡಬೇಕಾಗಿತ್ತು. ಆದರೆ, ಅಷ್ಟೊಂದು ಹಣ ಅವರ ಬಳಿ ಇರಲಿಲ್ಲ. ಹೀಗಾಗಿ ಆರ್ಥಿಕ ಸಮಸ್ಯೆಯಿಂದ ಬೇಸತ್ತು ಅವರು ಶುಕ್ರವಾರ ರಾತ್ರಿ ಕೃಷ್ಣದೇವರಾಯ ರೈಲು ನಿಲ್ದಾಣದ ಬಳಿ ಬಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಿಟಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.