ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ: ₹ 4.46 ಲಕ್ಷ ದಂಡ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2023, 15:58 IST
Last Updated 28 ಆಗಸ್ಟ್ 2023, 15:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 2,832 ಪ್ರಯಾಣಿಕರಿಂದ ₹ 4.46 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ತನಿಖಾ ತಂಡಗಳು ಒಂದು ತಿಂಗಳಲ್ಲಿ 43,698 ಬಸ್‌ಗಳನ್ನು ತನಿಖೆಗೆ ಒಳಪಡಿಸಿತ್ತು. ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಂದ ನಿಗಮದ ಆದಾಯದಲ್ಲಿ ₹ 63,914 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್‌ ಇಲ್ಲವೇ ಬಸ್‌ ಪಾಸ್‌ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT