ADVERTISEMENT

ಕೊರೊನಾ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ 41 ಮಂದಿಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2020, 21:57 IST
Last Updated 19 ಏಪ್ರಿಲ್ 2020, 21:57 IST
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಕಟ್ಟಡ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಕಟ್ಟಡ   

ಬೆಂಗಳೂರು: ಕೋವಿಡ್‌–19 ಆಸ್ಪತ್ರೆಯಾಗಿ ಪರಿವರ್ತನೆಗೊಂಡಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸದ್ಯ 41 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ ವಿಕ್ಟೋರಿಯಾದಲ್ಲಿದ್ದ ಸಾಮಾನ್ಯ ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲು ಸೂಚಿಸಿತ್ತು.ಒಂದೇ ಕಡೆ ಕೊರೊನಾ ಸೋಂಕಿತರನ್ನು ದಾಖಲಿಸಿಕೊಂಡಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯ ಎಂಬ ಸಲಹೆಯನ್ನು ಆರೋಗ್ಯ ಕ್ಷೇತ್ರದ ತಜ್ಞರು ನೀಡಿದ್ದರು. ಹಾಗಾಗಿ 550 ಹಾಸಿಗೆಗಳನ್ನು ಕೋವಿಡ್‌–19 ರೋಗಿಗಳಿಗೆ ಮೀಸಲಿಡಲಾಗಿದೆ.

ಆಕ್ಸಿಜನ್ ಪೂರೈಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಸಿರಿಂಜ್, ಔಷಧಿಗಳನ್ನು ಸಾಗಿಸಲು ಸೆನ್ಸರ್ ಆಧಾರಿತ ಸ್ವಯಂಚಾಲಿತ ಯಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ. ಇಲ್ಲಿ ದಾಖಲಾದ 64 ರೋಗಿಗಳಲ್ಲಿ 20 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ. ಮೂರು ಮಂದಿ ಚಿಕಿತ್ಸೆ ಫಲಿಸದೆಯೇ ಮೃತಪಟ್ಟಿದ್ದಾರೆ.

ADVERTISEMENT

ಟ್ರಾಮಾ ಕೇರ್‌ನಲ್ಲಿ 100 ಹಾಸಿಗೆಗಳು, ಶತಮಾನೋತ್ಸವ ಬ್ಲಾಕ್‌ನಲ್ಲಿ 200 ಹಾಸಿಗೆಗಳು, ‘ಸಿ’ ಬ್ಲಾಕ್‌ನಲ್ಲಿ 130 ಹಾಸಿಗೆಗಳು ಹಾಗೂ ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ 100 ಹಾಸಿಗೆಗಳನ್ನು ಮೀಸಲಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.