ADVERTISEMENT

‘ಗ್ರಾಮೀಣ ಜನರಿಗೂ ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ’: ಬಿ.ಎಚ್. ಅನಿಲ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 19:24 IST
Last Updated 6 ಜುಲೈ 2020, 19:24 IST
ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್
ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್   

ಬೆಂಗಳೂರು: ’ಪಾಲಿಕೆ ವ್ಯಾಪ್ತಿ ಹೊರತುಪಡಿಸಿಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟವರನ್ನು ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲು ಯಾವುದೇ ಅಡ್ಡಿಗಳು ಇಲ್ಲ’ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ಸ್ಪಷ್ಟಪಡಿಸಿದರು.

‘ಪಾಲಿಕೆ ವ್ಯಾಪ್ತಿಯ ಹೊರಗಿನ ರೋಗಿಗಳನ್ನು ಇಲ್ಲಿನ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ ಎಂಬ ದೂರುಗಳಲ್ಲಿ ಹುರುಳಿಲ್ಲ. ನಗರದ ಹೊರವಲಯದ ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮಾಂತರ ಜಿಲ್ಲೆಯ ಸೋಂಕಿತರಿಗೂ ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT