ADVERTISEMENT

ಕೊರೊನಾ: ಚಿಕಿತ್ಸಾ ಅವಧಿ ಕಡಿತ

​ಪ್ರಜಾವಾಣಿ ವಾರ್ತೆ
Published 26 ಮೇ 2020, 19:57 IST
Last Updated 26 ಮೇ 2020, 19:57 IST
   

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ಬೇಗ ಚೇತರಿಸಿಕೊಂಡಲ್ಲಿ ಇನ್ನುಮುಂದೆ 14 ದಿನಗಳ ಬದಲು 10 ದಿನಗಳಿಗೇ ಆಸ್ಪತ್ರೆಯಿಂದ ಮನೆಗೆ ತೆರಳಲು ಅವಕಾಶ ನೀಡಲಾಗುತ್ತದೆ.

ಈ ಬಗ್ಗೆ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು‌ ಸುತ್ತೋಲೆ ಹೊರಡಿಸಿದ್ದಾರೆ. ವ್ಯಕ್ತಿಗೆಮೂರು ದಿನಗಳಿಂದ ಶೀತ, ಜ್ವರ ಸೇರಿದಂತೆ ಸೋಂಕಿನ ಯಾವುದೇ ಲಕ್ಷಣಗಳು ಇರದಿದ್ದಲ್ಲಿ 10 ದಿನಗಳಿಗೆ ವ್ಯಕ್ತಿ ಮನೆಗೆ ತೆರಳಬಹುದಾಗಿದೆ. ಈ ಅವಧಿಯಲ್ಲಿ ಉಸಿರಾಟದ ಸಮಸ್ಯೆಗಳು ಸಹ ಇರಬಾರದು.

7ನೇ ದಿನಕ್ಕೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ಪರೀಕ್ಷಾ ವರದಿಯಲ್ಲಿ ಸೋಂಕು ಇದೆ ಎನ್ನುವುದು ನಮೂದಿಸಲ್ಪಟ್ಟಿದ್ದಲ್ಲಿ 72 ಗಂಟೆಗಳ ಬಳಿಕ ಇನ್ನೊಂದು ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ಇಲ್ಲ ಎನ್ನುವುದು ದೃಢಪಟ್ಟ ಬಳಿಕ ಮಾತ್ರ ಮನೆಗೆ ಕಳುಹಿಸಿಕೊಡಲಾಗುತ್ತದೆ. ವ್ಯಕ್ತಿ 14 ದಿನಗಳು ಮನೆಯಲ್ಲಿ ಕ್ವಾರಂಟೈನ್‌ಗೆ ಒಳಪಡಬೇಕು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.