ADVERTISEMENT

ಆರಂಭಿಸದ ಮರ ಗಣತಿ: ತರಾಟೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 21:47 IST
Last Updated 18 ಫೆಬ್ರುವರಿ 2020, 21:47 IST

ಬೆಂಗಳೂರು: ನ್ಯಾಯಾಲಯದ ಆದೇಶದ ಹೊರತಾಗಿಯೂ ನಗರದಲ್ಲಿ ಮರ ಗಣತಿ ಆರಂಭಿಸದ ಮರ ಪ್ರಾಧಿಕಾರವನ್ನು ತರಾಟೆಗೆ ತಗೆದುಕೊಂಡ ಹೈಕೋರ್ಟ್, ಪ್ರಾಧಿಕಾರ ಸದಸ್ಯರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವ ಇಂಗಿತ ವ್ಯಕ್ತಪಡಿಸಿದೆ.

ಮೆಟ್ರೊರೈಲು ಮಾರ್ಗ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ನಗರದಲ್ಲಿ ನೂರಾರು ಮರಗಳನ್ನು ಕತ್ತರಿಸಲಾಗುತ್ತಿದೆ ಎಂದು ಆರೋಪಿಸಿ ದತ್ತಾತ್ರೇಯ ಟಿ.ದೇವರೆ ಮತ್ತು ಬೆಂಗಳೂರು ಪರಿಸರ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT