ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರದಲ್ಲಿ ಸುರಿದ ಭಾರಿ ಮಳೆಗೆ ಶೇಷಾದ್ರಿಪುರ ಕಾನೂನು ಕಾಲೇಜು ಹಿಂಭಾಗದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಚಾಲಕ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮರ ಬಿದ್ದ ರಭಸಕ್ಕೆ ಕಾರಿನ ಗಾಜು ಸಂಪೂರ್ಣ ಜಖಂ ಆಗಿದ್ದು, ಪ್ರಯಾಣಿಕರಿಗೆ ಪೆಟ್ಟಾಗಿಲ್ಲ. ಎರಡು ವಿದ್ಯುತ್ ಕಂಬಗಳು ತುಂಡಾಗಿವೆ. ಇದರಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಸ್ಥಳಕ್ಕೆ ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಮರಗಳನ್ನು ತೆರವುಗೊಳಿಸಿದ್ದಾರೆ. ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬ ದುರಸ್ತಿಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.