
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಂದು ವರ್ಷದಲ್ಲಿ 5 ಸಾವಿರ ಗಿಡ ನೆಡಲಾಗುವುದು ಎಂದು ಅಖಿಲ ಭಾರತೀಯ ಗ್ರಾಮ ವಿಕಾಸ ಪರಿಷದ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಬಿಸ್ಮಿಲ್ ಹೇಳಿದರು.
ಸಂಸ್ಥೆಯು 2026ರಲ್ಲಿ ಹಮ್ಮಿಕೊಳ್ಳುವ ಯೋಜನೆಗಳ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದೆ. ಇದಲ್ಲದೇ ಬೆಂಗಳೂರನ್ನು ಕೊಳೆಗೇರಿ ಮುಕ್ತ ನಗರವನ್ನಾಗಿಸಲು ಸಮರ್ಪಕ ಯೋಜನೆಗಳನ್ನು ರೂಪಿಸುವ ಉದ್ದೇಶ ಹೊಂದಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.