ಬೆಂಗಳೂರು: ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆ-2019ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ 2019ರ ಜನವರಿ 27ಕ್ಕೆ ಮುಂದೂಡಿದೆ.
ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಮೊಹಮದ್ ಆರೀಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ವಿಚಾರಣೆಗೆ ಬಾಕಿ ಇವೆ. ಆದ್ದರಿಂದ ಈ ಅರ್ಜಿ ವಿಚಾರಣೆ ಮುಂದೂಡಬೇಕು’ ಎಂದು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಚಾರಣೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.