ADVERTISEMENT

ಕನ್ನಡಿಗರಿಗೆ ಉದ್ಯೋಗ ನೀಡಿ: ಸಚಿವರಿಗೆ ಪತ್ರ ಬರೆದು ಟಿ.ಎಸ್. ನಾಗಾಭರಣ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಮೇ 2020, 20:40 IST
Last Updated 30 ಮೇ 2020, 20:40 IST
ನಾಗಾಭರಣ
ನಾಗಾಭರಣ   

ಬೆಂಗಳೂರು: ‘ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಹೊರರಾಜ್ಯಗಳ ಬಹುತೇಕ ವಲಸೆ ಕಾರ್ಮಿಕರು ಊರಿಗೆ ಮರಳಿದ್ದಾರೆ. ಈ ಅವಕಾಶ ಬಳಸಿ ಕನ್ನಡಿಗರಿಗೆ ಉದ್ಯೋಗ ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ‌

ಈ ಸಂಬಂಧಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿರುವ ಅವರು, ‘ಹೊರರಾಜ್ಯಗಳ ವಲಸೆ ಕಾರ್ಮಿಕರು ಊರಿಗೆ ಮರಳಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತದೆ ಎಂಬ ಆತಂಕ ಬೇಡ. ವಲಸೆ ಕಾರ್ಮಿಕರನ್ನು ಮನವೊಲಿಸಿ ಕರೆತರಬೇಕು ಎನ್ನುವ ಉದ್ಯಮಿಗಳ ಅಭಿಪ್ರಾಯ ಸರಿಯಲ್ಲ. ನೈಪುಣ್ಯ ಹೊಂದಿರುವ ಸಾಕಷ್ಟು ಮಂದಿ ಕನ್ನಡಿಗರಿದ್ದು, ಅವರನ್ನು ಈ ಸಂದರ್ಭದಲ್ಲಿ ಬಳಸಿಕೊಳ್ಳಬೇಕು’‌ ಎಂದು ಅವರು ತಿಳಿಸಿದ್ದಾರೆ.

‘ನಮ್ಮ ರಾಜ್ಯದ ಕಾರ್ಮಿಕರು ಕಟ್ಟಡ ನಿರ್ಮಾಣದಲ್ಲಿ ನೈಪುಣ್ಯ ಹೊಂದಿದ್ದಾರೆ. ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ, ನವದೆಹಲಿಯಂತಹ ರಾಜ್ಯಗಳಿಗೆ ವಲಸೆ ಹೋಗಿ, ಶೋಷಣೆಗೊಳಗಾಗುತ್ತಿರುವ ಕನ್ನಡಿಗರೂ ರಾಜ್ಯಕ್ಕೆ ಮರಳಿದ್ದಾರೆ. ಅವರಿಗೂ ನಮ್ಮ ರಾಜ್ಯದಲ್ಲಿಯೇ ಉದ್ಯೋಗಾವಕಾಶ ಒದಗಿಸಿದಲ್ಲಿ ವಲಸೆ ತಡೆಯಬಹುದು’ ಎಂದು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.