ADVERTISEMENT

ಕ್ಷಯ ನಿಯಂತ್ರಣ: ಬೆಂಗಳೂರು ಸೇರಿ ರಾಜ್ಯದ 14 ಜಿಲ್ಲೆಗಳು ಉತ್ತಮ ಸಾಧನೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 19:31 IST
Last Updated 23 ಮಾರ್ಚ್ 2022, 19:31 IST
ಕ್ಷಯ ರೋಗ (ಸಾಂದರ್ಭಿಕ ಚಿತ್ರ)
ಕ್ಷಯ ರೋಗ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ 14 ಜಿಲ್ಲೆಗಳು ಕ್ಷಯ ರೋಗ ನಿಯಂತ್ರಣದಲ್ಲಿ ಉತ್ತಮ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರದ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

ಬೆಳಗಾವಿ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕ್ಷಯ ರೋಗವು 2015ಕ್ಕೆ ಹೋಲಿಸಿದರೆ ಶೇ 40 ರಷ್ಟು ಇಳಿಕೆಯಾಗಿದೆ.ಬೆಂಗಳೂರು ಗ್ರಾಮಾಂತರ, ವಿಜಯಪುರ, ಚಾಮರಾಜನಗರ, ದಾವಣಗೆರೆ, ಧಾರವಾಡ, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಶೇ 20 ರಷ್ಟು ಇಳಿಕೆಯಾಗಿದೆ.

ಶೇ 40 ರಷ್ಟುಇಳಿಕೆಯಾದ ಜಿಲ್ಲೆಗಳಿಗೆ ಬೆಳ್ಳಿ ಪದಕ ಹಾಗೂ ಶೇ 20 ರಷ್ಟು ಇಳಿಕೆಯಾದ ಜಿಲ್ಲೆಗಳಿಗೆ ಕಂಚಿನ ಪದಕವನ್ನು ಕೇಂದ್ರ ಸರ್ಕಾರ ನೀಡಲಿದೆ.ವಿಶ್ವ ಕ್ಷಯ ರೋಗ ದಿನದ ಅಂಗವಾಗಿ ನವದೆಹಲಿಯಲ್ಲಿ ಗುರುವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.