ಬೆಂಗಳೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ ನಮ್ಮ ಮೆಟ್ರೊ ಕಾಮಗಾರಿ ಪೂರ್ಣಗೊಂಡಿರುವ ಪ್ರದೇಶಗಳಲ್ಲಿ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಿ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬಿಬಿಎಂಪಿ, ಮೆಟ್ರೊ, ಜಲಮಂಡಳಿ ಹಾಗೂ ಒಆರ್‌ಆರ್‌ಸಿಎ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಹೊರ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ 22 ರಸ್ತೆಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಹೊರ ವರ್ತುಲ ರಸ್ತೆಯಲ್ಲಿನ ಮೇಲ್ಸೇತುವೆಗಳನ್ನು ದುರಸ್ತಿಪಡಿಸಬೇಕು. ಪಣತ್ತೂರ್ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳಬೇಕು ಎಂದರು.
ಮೆಟ್ರೊ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ವರ್ ರಾವ್ ಮಾತನಾಡಿ, ‘ಮೆಟ್ರೊ 2ಎ ಕಾಮಗಾರಿ ನಡೆಯುವ ರಸ್ತೆಯ ವಿಭಜಕ ನಿರ್ವಹಣೆಯನ್ನು ಮೆಟ್ರೊ ವತಿಯಿಂದ ಮಾಢಲಾಗುತ್ತದೆ. ಬಿಬಿಎಂಪಿ ಹಾಗೂ ಮೆಟ್ರೊ ಸಮನ್ವಯದಲ್ಲಿ ಕಾಮಗಾರಿಯನ್ನು ನಾಗರಿಕರು ಹಾಗೂ ಐಟಿ ಉದ್ಯೋಗಿಗಳಿಗೆ ತೊಂದರೆ ಉಂಟಾಗದ ನಿರ್ವಹಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.