ADVERTISEMENT

ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ 177 ಚೀಲ ಪ್ಲಾಸ್ಟಿಕ್ ವಶ

​ಪ್ರಜಾವಾಣಿ ವಾರ್ತೆ
Published 30 ಮೇ 2022, 20:01 IST
Last Updated 30 ಮೇ 2022, 20:01 IST
ಲಾರಿ ಸಹಿತ ಪ್ಲಾಸ್ಟಿಕ್ ಚೀಲಗಳನ್ನು ಬಿಬಿಎಂಪಿ ವಶಕ್ಕೆ ಪಡೆದಿರುವುದು
ಲಾರಿ ಸಹಿತ ಪ್ಲಾಸ್ಟಿಕ್ ಚೀಲಗಳನ್ನು ಬಿಬಿಎಂಪಿ ವಶಕ್ಕೆ ಪಡೆದಿರುವುದು   

ಬೆಂಗಳೂರು: ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ಲಾರಿ ಮೂಲಕ ಅಂಗಡಿಗಳಿಗೆ ಸಾಗಿಸುತ್ತಿದ್ದ 25 ಕೆ.ಜಿ ತೂಕದ 177 ಚೀಲಗಳನ್ನು ಬಿಬಿಎಂಪಿ ಸೋಮವಾರ ವಶಕ್ಕೆ ಪಡೆದಿದೆ.

7.30ರ ಸುಮಾರಿಗೆ ಪ್ಲಾಸ್ಟಿಕ್ ಸಾಗಿಸುತ್ತಿದ್ದ ಲಾರಿಯನ್ನು ಮಾರ್ಷಲ್‌ಗಳು ತಪಾಸಣೆ ನಡೆಸಿದಾಗ ಎಲ್ಲ ಚೀಲಗಳಲ್ಲೂ ನಿಷೇಧಿತ ಪ್ಲಾಸ್ಟಿಕ್ ಇರುವುದು ಪತ್ತೆಯಾಯಿತು. ಲಾರಿ ಸಹಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಯಿತು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

‘ಗುಜರಾತಿನ ಅಹಮದಾಬಾದ್ ಜಿಲ್ಲೆಯಿಂದ ಲಾರಿ ಬಂದಿದ್ದು, ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಎಸ್.ವಿ. ರಸ್ತೆ, ಕಲಾಸಿಪಾಳ್ಯ, ಕೆ.ಆರ್. ಮಾರುಕಟ್ಟೆಯಲ್ಲಿ ವಿವಿಧ ಅಂಗಡಿಗಳಿಗೆ ವಿತರಣೆ ಮಾಡಲಾಗುತ್ತಿತ್ತು ಎಂದು ಚಾಲಕರು ತಿಳಿಸಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದ ಪ್ರಕಾರ ಕ್ರಮ ಜರುಗಿಸಲಾಗುವುದು’ ಎಂದು ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಪರಶುರಾಮ್ ಶಿನ್ನಾಳ್ಕರ್ ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.