ADVERTISEMENT

ಬೆಂಗಳೂರು | ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಸುಲಿಗೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 20:21 IST
Last Updated 25 ಫೆಬ್ರುವರಿ 2026, 20:21 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆಯ (ಜಿಎಸ್‌ಟಿ) ಅಧಿಕಾರಿಗಳ ಸೋಗಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಇಬ್ಬರನ್ನು ಬನಶಂಕರಿ ಠಾಣೆ ಪೊಲೀಸರು‌ ಬಂಧಿಸಿದ್ದಾರೆ.

ADVERTISEMENT

ಬಂಧಿತರಾದ ನಾಗರಾಜ್ ಹಾಗೂ ದಾದಾಪೀರ್ ಅವರಿಂದ ₹5 ಲಕ್ಷ ನಗದು, ಮೂರು ನಕಲಿ ಗುರುತಿನ ಚೀಟಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳಿಬ್ಬರು ಬನಶಂಕರಿ ಯಲ್ಲಿರುವ ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಆರೋಪಿಗಳು ನಕಲಿ ಗುರುತಿನ ಚೀಟಿ ತೋರಿಸಿ ಜ.10ರಂದು ಪೀಣ್ಯದಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳು ಜಿಎಸ್‌ಟಿ– ಸಿಎಲ್‌ಟಿಎಸ್‌ ಹಾಗೂ ಇಂಟಲಿಜೆನ್ಸ್ ಅಧಿಕಾರಿಗಳಂತೆ ನಕಲಿ ಗುರುತಿನ ಚೀಟಿ ಮಾಡಿಸಿಕೊಂಡಿದ್ದರು. ಅವರ ಕಾರ್ಯವೈಖರಿ ಬಗ್ಗೆ ಅನುಮಾನಗೊಂಡಿದ್ದ ಇಲಾಖೆ ಅಧಿಕಾರಿಗಳು, ಫೆ.17ರಂದು ವಿಚಾರಣೆಗೆ ಒಳಪಡಿಸಿದ್ದರು. ಅವರು ವಾಸವಿದ್ದ ಮನೆ ಹಾಗೂ ಅವರಿಗೆ ಕಚೇರಿಯಲ್ಲಿ ನೀಡಲಾಗಿದ್ದ ಕೊಠಡಿಗಳಲ್ಲಿ ಪರಿಶೀಲನೆ ನಡೆಸಿದ್ದರು. ಆಗ, ನಕಲಿ ಗುರುತಿನ ಚೀಟಿಗಳು ಪತ್ತೆ ಆಗಿದ್ದವು. ಪೊಲೀಸರಿಗೆ ಜಿಎಸ್‌ಟಿ ಅಧಿಕಾರಿಗಳು ದೂರು ನೀಡಿದ್ದರು. ಆ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಮೂಲಗಳು ಹೇಳಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.