ಬೆಂಗಳೂರು: ವೈದ್ಯಕೀಯ ವೀಸಾದಡಿ ನಗರಕ್ಕೆ ಬಂದು ವಾಪಸು ಹೋಗದೇ ಅಕ್ರಮವಾಗಿ ವಾಸವಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ನಗರದಲ್ಲಿ ಅಕ್ರಮವಾಗಿ ವಾಸವಿರುವವರನ್ನು ಪತ್ತೆ ಮಾಡಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೊಡಿಗೇಹಳ್ಳಿ ಹಾಗೂ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರನ್ನು ಇತ್ತೀಚೆಗೆ ಬಂಧಿಸಲಾಗಿದ್ದು, ಅವರ ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘2023ರಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ನಗರದಕ್ಕೆ ಬಂದಿದ್ದ ಮಹಿಳೆ, ವೀಸಾ ಅವಧಿ ಮುಗಿದರೂ ತಮ್ಮ ದೇಶಕ್ಕೆ ವಾಪಸು ಹೋಗಿರಲಿಲ್ಲ. ಜೊತೆಗೆ, ಇನ್ನೊಬ್ಬ ವಿದೇಶಿ ಪ್ರಜೆ ಸಹ ವೈದ್ಯಕೀಯ ವೀಸಾದಡಿ ನಗರಕ್ಕೆ ಬಂದು ಅಕ್ರಮವಾಗಿ ವಾಸವಿದ್ದ. ಇವರಿಬ್ಬರೂ ಅಕ್ರಮ ಚಟುವಟಿಕೆಯಲ್ಲಿ ತೊಡಗುವ ಸಾಧ್ಯತೆ ಇತ್ತು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.