ಬೆಂಗಳೂರು: ಮೋಜು–ಮಸ್ತಿಗಾಗಿ ಹಣ ಹೊಂದಿಸಲು ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
‘ಸುನೀಲ್ ಹಾಗೂ ಅವಿನಾಶ್ ಬಂಧಿತರು. ಇವರಿಂದ ₹11 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನ ಹಾಗೂ 125 ಗ್ರಾಂ ತೂಕದ ಚಿನ್ನದ ಸರಗಳನ್ನು ಜಪ್ತಿ ಮಾಡಲಾಗಿದೆ. ಮೈಸೂರು ರಸ್ತೆಯ ನ್ಯೂ ಟಿಂಬರ್ ಯಾರ್ಡ್ ಬಡಾವಣೆಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಫೆಬ್ರುವರಿ 23ರಂದು ಕಳ್ಳತನವಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು
ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.