
ಪರ್ವ್ ರಾತಿ, ಅಂಶ್ ಮೆಹ್ತಾ
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಮದ್ಯದ ಅಮಲಿನಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದ ತಮಿಳುನಾಡಿನ ಇಬ್ಬರನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನೈನ ಅಂಶ್ ಮೆಹ್ತಾ (22) ಹಾಗೂ ಪರ್ವ್ ರಾತಿ (22) ಬಂಧಿತರು.
ಹೊಸ ವರ್ಷಾಚರಣೆ ಸಂಭ್ರಮದ ಬಳಿಕ ನಾಲ್ವರು ಯುವತಿಯರು ಅಂಬೇಡ್ಕರ್ ರಸ್ತೆಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದರು. ಸ್ಥಳಕ್ಕೆ ಬಂದಿದ್ದ ಆರೋಪಿಗಳು, ಯವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದರು. ಯುವತಿಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ಬಂದಿದ್ದರು. ಆರೋಪಿಗಳನ್ನು ಪ್ರಶ್ನೆ ಮಾಡಿದ್ದ ಪೊಲೀಸರು, ಬುದ್ಧಿಮಾತು ಹೇಳಿ ಸ್ಥಳದಿಂದ ತೆರಳುವಂತೆ ಸೂಚಿಸಿದ್ದರು. ಪಾನಮತ್ತರಾಗಿದ್ದ ಆರೋಪಿಗಳು ಪೊಲೀಸ್ ಸಿಬ್ಬಂದಿಯನ್ನು ತಳ್ಳಾಡಿ, ರಿಫ್ಲೆಕ್ಟರ್ ಜಾಕೆಟ್ ಹರಿದು ಹಾಕಿದ್ದರು ಎಂದು ಮೂಲಗಳು ಹೇಳಿವೆ.
ಕಾನ್‌ಸ್ಟೆಬಲ್ ಕೆ.ರವಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.