ADVERTISEMENT

ರಾಜ್ಯದ ವಿವಿಧೆಡೆ ಎರಡು ದಿನ ಮಳೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 19:32 IST
Last Updated 23 ಆಗಸ್ಟ್ 2022, 19:32 IST
   

ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ. ಕರಾವಳಿ ತೀರದಲ್ಲಿ ಬಿರು ಗಾಳಿಯ ವೇಗವು ಪ್ರತಿ ಗಂಟೆಗೆ 40 ಕಿ.ಮೀ. ಇಂದ 50 ಕಿ.ಮೀ. ಇರಲಿದೆ. ಈ ವೇಗ 60 ಕಿ.ಮೀ.ವರೆಗೂ ತಲು‍ಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.