ADVERTISEMENT

‘ರಾಜ್ಯದಲ್ಲಿ ಎರಡು ಜನೌಷಧಿ ವಿತರಣೆ ಕೇಂದ್ರ’

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭರವಸೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:34 IST
Last Updated 15 ಫೆಬ್ರುವರಿ 2021, 21:34 IST

ಬೆಂಗಳೂರು: ‘ರಾಜ್ಯದ ಜನೌಷಧಿ ಅಂಗಡಿಗಳಿಗೆ ಔಷಧ ಪೂರೈಕೆಯನ್ನು ಇನ್ನಷ್ಟು ತ್ವರಿತಗೊಳಿಸಲು ಎರಡು ಹೊಸ ವಿತರಣಾ ಕೇಂದ್ರಗಳಿಗೆ ಅನುಮತಿ ನೀಡಲಾಗುವುದು’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.

ನಗರದಲ್ಲಿ ಜನೌಷಧಿ ಕೇಂದ್ರದವರ ಜೊತೆ ಸೋಮವಾರ ಸಭೆ ನಡೆಸಿ, ಅವರ ಕುಂದು-ಕೊರತೆ, ಬೇಡಿಕೆಯನ್ನು ಆಲಿಸಿದರು.

‘ಬೆಂಗಳೂರು ಮತ್ತು ಮೈಸೂರಿನಲ್ಲಿ ಜನೌಷಧಿ ವಿತರಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಕರ್ನಾಟಕ ರಾಜ್ಯ ಸಹಕಾರಿ ಮಾರುಕಟ್ಟೆ ಒಕ್ಕೂಟಕ್ಕೆ ಹುಬ್ಬಳ್ಳಿಯಲ್ಲಿ ಜನೌಷಧ ವಿತರಣಾ ಕೇಂದ್ರ ಆರಂಭಿಸಲು ಪರವಾನಗಿ ನೀಡಲಾಗಿದ್ದು, ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ಕಲ್ಯಾಣ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ವಿತರಣಾ ಕೇಂದ್ರಗಳನ್ನು ಆರಂಭಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.