ADVERTISEMENT

ಇಬ್ಬರು ಅಧಿಕಾರಿಗಳ ಅಮಾನತು

ಬಿಬಿಎಂಪಿ: ಕಳಪೆ ರಸ್ತೆ ಕಾಮಗಾರಿಯ ದೂರು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 4:33 IST
Last Updated 28 ಸೆಪ್ಟೆಂಬರ್ 2022, 4:33 IST

ಬೆಂಗಳೂರು: ನ್ಯೂ ಬಿಇಎಲ್‌ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಬಿಬಿಎಂಪಿಯ ಇಬ್ಬರು ಎಂಜಿನಿಯರ್‌ ಗಳನ್ನು ಅಮಾನತು ಮಾಡಲಾಗಿದೆ.

ಸಹಾಯಕ ಕಾರ್ಯಪಾಲಕ ಎಂಜಿನಿ ಯರ್‌ ಎಂ.ಸಿ.ಕೃಷ್ಣೇಗೌಡ ಹಾಗೂ ಬಿಬಿಎಂಪಿ ರಸ್ತೆ ಅಭಿವೃದ್ಧಿ ವಿಭಾಗದ (ಪಶ್ಚಿಮ ವಿಭಾಗ) ವಿಷಕಂಠ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.

ಕಳೆದ ತಿಂಗಳು ನಡೆದಿದ್ದ ಇಲಾಖೆಗಳ ಆಂತರಿಕ ಸಮನ್ವಯ ಸಮಿತಿ ಸಭೆಯಲ್ಲಿ ಸಂಚಾರ ಪೊಲೀಸರು ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್‌ ಬಿ.ಎಸ್‌. ಪ್ರಹ್ಲಾದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ADVERTISEMENT

ರಸ್ತೆ ಪರಿಶೀಲನೆ ವೇಳೆ ಲೋಪ ಕಂಡುಬಂದಿತ್ತು. ಮೂಲಸೌಕರ್ಯದಿಂದ ಕೆಲವು ಸೂಚನೆ ನೀಡಿದ್ದರೂ ಅಧಿಕಾರಿಗಳು ಪಾಲನೆ ಮಾಡಿರಲಿಲ್ಲ. ಕಳಪೆ ಕಾಮಗಾರಿಯ ದೂರನ್ನು ಗಂಭೀರವಾಗಿ ಪರಿಗಣಿಸದ ಕಾರಣಕ್ಕೆ ಅಮಾನತುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.